ಶಾಲಾ ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ- ಶಿಕ್ಷಣ ಸಚಿವರು
ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ- ಶಿಕ್ಷಣ ಸಚಿವರು
ಪ್ರಾಥಾಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಸುರೇಶ್ ಕುಮಾರ ಅವರು ಶಾಲಾ - ಕಾಲೇಜುಗಳ ಆರಂಭದ ಕುರಿತು ತಮ್ಮ ಪೇಸ್‌ಬುಕ್ ಪೇಜ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿರುತ್ತಾರೆ.
ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ ಶಾಲಾ -ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ.
ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯವನ್ನು ಆಹ್ವಾನಿಸುತ್ತಿದ್ದೇನೆ.
ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ.
ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲಾ-ಕಾಲೇಜುಗಳ ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ.


No comments