ಶಾಲೆಗಳ ಪುನರಾರಂಭ ರಾಜ್ಯ ಸರ್ಕಾರದ ಮಹತ್ವದ ಆದೇಶ
ಶಾಲೆಗಳ ಪುನರಾರಂಭ ರಾಜ್ಯ ಸರ್ಕಾರದ ಮಹತ್ವದ ಆದೇಶ
ಈ ನಡುವಲ್ಲೆ ಪ್ರಸಕ್ತ ಶೈಕ್ಷಣಿಕ ವರ್ಷಾರಂಭದ ಕುರಿತು ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 30 ರ ಒಳಗಾಗಿ ಮಕ್ಕಳನ್ನು ಶಾಲೆಗೆ ಸೇರಿಸಿ ಶುಲ್ಕ ಪಾವತಿಸುವಂತೆ ಆದೇಶಿಸಿದೆ. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ದಾಖಲು ಮಾಡಿಕೊಳ್ಳುವ ಪ್ರಕ್ರಿಯೆ ಮುಕ್ತಾಯವಾಗಿದೆ.
ಕರೋನಾ ಸೋಂಕಿನ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳಲ್ಲಿ ಮಕ್ಕಳ ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಪ್ರವೇಶ ಪ್ರಕ್ರಿಯೆ, ಶಾಲಾ ಶುಲ್ಕ ಪಾವತಿಸುವ ಕುರಿತು ಆದೇಶ ಹೊರಡಿಸಿದ್ದು, ಪೋಷಕರು ಪ್ರಥಮ ಕಂತಿನ ಶುಲ್ಕ ಪಾವತಿಸಿ ಮಕ್ಕಳನ್ನು ಶಾಲೆಗೆ ಸೇರಿಸಲು ಅವಕಾಶ ಕಲ್ಪಿಸಿದೆ. 2020 -21 ಸಾಲಿನ ಪ್ರವೇಶ ಪ್ರಕ್ರಿಯೆಯಲ್ಲಿ ಶಾಲಾ ಆಡಳಿತ ಮಂಡಳಿಯವರು ಪೋಷಕರಿಂದ ಹೆಚ್ಚಿನ ಶುಲ್ಕವನ್ನು ಪಡೆಯದೆ, ಶುಲ್ಕವನ್ನು ಕಂತುಗಳಲ್ಲಿ ಪಡೆಯಲು ಆದೇಶದಲ್ಲಿ ಸ್ಪಷ್ಟವಾಗಿ ಸೂಚಿಸಿದೆ.
ಕಳೆದ 5 ತಿಂಗಳಿದ ಮಕ್ಕಳು ಮನೆಯಲ್ಲೆ ಇದ್ದಿರುವ ಕಾರಣ ಶೈಕ್ಷಣಿಕ ಚಟುವಟಿಕೆಗಳಿಂದ ದೂರವಾಗಿದ್ದಾರೆ. ಈ ಪರಿಸ್ಥಿತಿ ಹೀಗೆ ಮುಂದುವರೆದರೆ ಮಕ್ಕಳು ಕಲಿಕೆಯಲ್ಲಿ ಆಸಕ್ತಿಯನ್ನು ಕಳೆದುಕಳ್ಳುವ ಸಂಭವವಿರುತ್ತದೆ. ಅಲ್ಲದೆ ಶಾಲೆ ಆರಂಭವಾದ ಮೇಲೆಯು ಮಲ್ಲಳು ಶಾಲೆಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಹಾಗೆ ವಿದ್ಯಾರ್ಥಿಗಳು ಬಾಲಾಕಾರ್ಮಿಕ ಪದ್ದತಿ ಮತ್ತು ಬಾಲ್ಯ ವಿವಾಹದಂತಹ ಸಾಮಾಜಿಕ ಪಿಡುಗುಗಳಿಗೆ ಬಲಿಯಾಗುವ ಅಪಾಯವಿರುತ್ತದೆ.
ಆದರಿಂದ 2020-21 ನೇ ಸಾಲಿನಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ದಿನಾಂಕ 30-09-2020 ರೋಳಗೆ ಪೂರ್ಣಗೊಳಿಸಲು ಎಲ್ಲಾ ಶಾಲೆಗಳಿಗೆ ಹಾಗೂ ಪೋಷಕರಿಗೆ ಶಿಕ್ಷಣ ಇಲಾಖೆಯ ಆದೇಶದಲ್ಲಿ ಸೂಚಿಸಲಾಗಿದೆ.

No comments